Saturday, August 29, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನಾಲ್ಕು ಮಂದಿಗೆ ವಿಚಾರಣೆಯಲ್ಲಿ ಕಾಲಾವಕಾಶ ನೀಡಿದ ಎಸ್ಐಟಿ

ಬೆಳ್ತಂಗಡಿ : ನಾಲ್ಕು ಮಂದಿಗೆ ವಿಚಾರಣೆಯಲ್ಲಿ ಕಾಲಾವಕಾಶ ನೀಡಿದ ಎಸ್ಐಟಿ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಯಲ್ಲಿ ನಾಲ್ಕು ಮಂದಿಗೆ ಎಸ್ಐಟಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ.

ಬುರುಡೆ ಪ್ರಕರಣದಲ್ಲಿ ಅ.27 ರಂದು ಐದು ಮಂದಿಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು ಅದರಂತೆ ಸುಜಾತ ಭಟ್ ಮಾತ್ರ ಅ.27 ರಂದು ವಿಚಾರಣೆಗೆ ಹಾಜರಾಗಿದ್ದರು.ಉಳಿದ ನಾಲ್ಕು ಮಂದಿ ಗಿರೀಶ್ ಮಟ್ಟಣ್ಣವರ್, ಸೌಜನ್ಯ ಮಾವ ವಿಠಲ್ ಗೌಡ, ಜಯಂತ್ ಟಿ, ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದರು.

ಉಡುಪಿಯಿಂದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಮಧ್ಯಾಹ್ನ ಬಂದ ನಾಲ್ಕು ಮಂದಿಯ ಪರ ವಕೀಲೆ ಅಂಬಿಕಾ ಪ್ರಭು ಎಸ್.ಐ.ಟಿ ವಿಚಾರಣೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಗೆ ಏಳು ದಿನದ ಒಳಗಡೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ್ದು. ಉಳಿದ ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡರಿಗೆ ನಾಲ್ಕು ದಿನದ ಒಳಗಡೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಲಾಗಿದೆ ಎಂದು ಎಸ್‌.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!