- Advertisement -
![]()
- Advertisement -
ಮಂಗಳೂರು: ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಸಿಎಂ, ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂಬ ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ಅವರ ಸ್ವಂತ ಅಭಿಪ್ರಾಯ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಸಚಿವ ಕೆ.ಹೆಚ್. ಮುನಿಯಪ್ಪ ಇರುವ ವಿಚಾರದ ಬಗ್ಗೆ ಮಾತನಾಡಿದ ಸಿಎಂ,
ಪ್ರಜಾಪ್ರಭುತ್ವದಲ್ಲಿ ಸ್ಪರ್ಧೆಯಲ್ಲಿ ಇರುವವರನ್ನು ಇರಬೇಡಿ ಎಂದು ಹೇಳಲು ಆಗಲ್ಲ, ಸ್ಥಾನ ಕೇಳುವುದು ಅವರ ಹಕ್ಕು ಎಂದಿದ್ದಾರೆ.ಇದೇ ವೇಳೆ, ನಿನ್ನೆ ನವದೆಹಲಿಗೆ ತೆರಳಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಸಂಜೆ ಬೆಂಗಳೂರಿಗೆ ವಾಪಸಾಗಿದ್ದಾರೆ.
- Advertisement -


