Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ

ಬೆಳ್ತಂಗಡಿ: ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ

- Advertisement -
- Advertisement -

ಬೆಳ್ತಂಗಡಿ : ಉಜಿರೆಯ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ಸಕಲೇಶಪುರ ಮೂಲದ ವಿದ್ಯಾರ್ಥಿನಿಯೊಬ್ಬಳು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಕಲೇಶ್ ಪುರ ನಿವಾಸಿ ಉಮೇಶ್ ಎಂಬವರು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ತನ್ನ ಮಗಳು ಕಾವ್ಯ (17ವರ್ಷ) ಉಜಿರೆಯ ಖಾಸಗಿ ಕಾಲೇಜಿನಲ್ಲಿ Bsc ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಅ.24ರಂದು ಸಕಲೇಶ್ ಪುರದಿಂದ ಉಜಿರೆ ಕಾಲೇಜಿಗೆಂದು ಹೊರಟಿದ್ದು ಅ.25 ರಂದು ಆಕೆ ಕಾಲೇಜಿಗೆ ಹೋಗದಿರುವ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಕರೆ ಮಾಡಿ ಆಕೆ ಕಾಲೇಜಿಗೆ ಬರದಿರುವ ಬಗ್ಗೆ ತಿಳಿಸಿದ್ದರು. ಅದರಂತೆ ಉಮೇಶ್ ಮಗಳಿಗೆ ಕರೆ ಮಾಡಿ ಕಾಲೇಜಿಗೆ ಹೋಗಿ ಪ್ರಾಂಶುಪಾಲರಲ್ಲಿ ಮಾತನಾಡುವಂತೆ ತಿಳಿಸಿದ್ದು ಅದರಂತೆ ಆಕೆ ಕಾಲೇಜಿನ ಪ್ರಾಂಶುಪಾಲರನ್ನು ಭೇಟಿಯಾಗಿ ಬಳಿಕ ಹಾಸ್ಟೆಲ್ ಗೆ ಹೋಗುತ್ತೇನೆ ಎಂದು ಹೋಗಿದ್ದಳು. ಆದರೆ ಮತ್ತೆ ಆಕೆ ಹಾಸ್ಟೆಲ್ ಗೆ ಹಿಂತಿರುಗಿಲ್ಲ.ಈ ಹಿನ್ನಲೆಯಲ್ಲಿ ಕಾಲೇಜಿನಿಂದ ಬಂದ ಮಾಹಿತಿಯಂತೆ ಹಾಸ್ಟೆಲ್ ಗೆ ತೆರಳಿ ಪರಿಶೀಲಿಸದಾಗ ಆಕೆ ಹಾಸ್ಟೆಲ್ ಗೆ ಬಾರದಿರುವುದು ಸ್ಪಷ್ಟವಾಗಿದ್ದು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಬಾಲಕಿಯ ತಂದೆ ನೀಡಿರುವ ದೂರಿನಂತೆ
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.25 ರಂದು ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಈಕೆಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ(9480805370 ಅಥವಾ 08256-232093 ಸಂಖ್ಯೆಗೆ) ಮಾಹಿತಿ ನೀಡಲು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನೀಡುವಂತೆ ಕೋರಲಾಗಿದೆ.

- Advertisement -

Latest News

error: Content is protected !!