Friday, June 5, 2026
Homeತಾಜಾ ಸುದ್ದಿಆರ್‌ಎಸ್‌ಎಸ್ ಸಂಬಂಧಿತ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ: ಸರ್ಕಾರದ ನಿರ್ಬಂಧದ ಆದೇಶಕ್ಕೆ ಮಧ್ಯಾಂತರ ತಡೆ 

ಆರ್‌ಎಸ್‌ಎಸ್ ಸಂಬಂಧಿತ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ: ಸರ್ಕಾರದ ನಿರ್ಬಂಧದ ಆದೇಶಕ್ಕೆ ಮಧ್ಯಾಂತರ ತಡೆ 

- Advertisement -
- Advertisement -

ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಸರ್ಕಾರಿ ಆವರಣದಲ್ಲಿ ತಮ್ಮ ಚಟುವಟಿಕೆಗಳನ್ನು ನಡೆಸುವ ಮೊದಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ಕರ್ನಾಟಕ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ಮಂಗಳವಾರ ಮಧ್ಯಾಂತರ ತಡೆಯಾಜ್ಞೆ ನೀಡಿದೆ.

ಧಾರವಾಡ ಹೈಕೋರ್ಟ್ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಸರ್ಕಾರದ ನಿರ್ದೇಶನಕ್ಕೆ ಮಧ್ಯಾಂತರ ತಡೆಯಾಜ್ಞೆ ನೀಡಿದೆ. ಈ ಕುರಿತ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿದೆ.

ಆರ್‌ಎಸ್‌ಎಸ್ ಸಂಬಂಧಿತ ಪಥಸಂಚಲನ ಚಟುವಟಿಕೆಗಳನ್ನು ನಿರ್ಬಂಧಿಸುವ ಗುರಿಯನ್ನು ಹೊಂದಿದೆ ಎಂದು ಭಾವಿಸಲಾದ ಈ ಆದೇಶವು ಮುಂದಿನ ವಿಚಾರಣೆಯವರೆಗೆ ತಡೆಹಿಡಿಯಲ್ಪಟ್ಟಿದೆ ಎಂದು ವರದಿ ತಿಳಿಸಿದೆ

- Advertisement -

Latest News

error: Content is protected !!