Thursday, June 4, 2026
Homeಚಿಕ್ಕಮಗಳೂರುಪತಿ ಮನೆಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಗೃಹಿಣಿ

ಪತಿ ಮನೆಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಗೃಹಿಣಿ

- Advertisement -
- Advertisement -

ಚಿಕ್ಕಮಗಳೂರು; ಪತಿ ಮನೆಯವರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಎನ್.ಆರ್.ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ಶರತ್ ಎಂಬವರ ಪತ್ನಿ ಪೂಜಾ(30) ಆತ್ಮಹತ್ಯೆ ಮಾಡಿಕೊಂಡವರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಶಂಕರಳ್ಳಿ ಈಶ್ವರಪ್ಪ ಎಂಬುವವರ ಪುತ್ರಿ ಪೂಜಾರನ್ನು ಮೂರು ವರ್ಷಗಳ ಹಿಂದೆ ಎನ್.ಆರ್.ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ಶರತ್ ಎಂಬವರಿಗೆ ಮದುವೆ ಮಾಡಲಾಗಿತ್ತು. ದಂಪತಿಗೆ ಎರಡೂವರೆ ವರ್ಷದ ಗಂಡು ಮಗುವಿದೆ.

ಶರತ್ ತಂದೆ,ತಾಯಿ ಹಾಗೂ ಶರತ್ ನ ಸಹೋದರಿ ಸೇರಿ ಪೂಜಾಳಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಕಿರುಕುಳಕ್ಕೆ ಬೇಸತ್ತ ಪೂಜಾ ತಾಯಿ ಮನೆಗೆ ಬಂದು ತನ್ನ ಸಂಕಷ್ಟವನ್ನು ಹೇಳಿಕೊಂಡಿದ್ದರು. ಹೆತ್ತವರು ಸಮಾಧಾನ ಮಾಡಿ ಕಳುಹಿಸಿದ್ದರು. ಮತ್ತೆ ಕಿರುಕುಳ ಹೆಚ್ಚಾದ ಹಿನ್ನೆಲೆ ಕಳೆನಾಶಕ ಸೇವಿಸಿ ಪೂಜಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೇ ಪೂಜಾ ಸಾವನ್ನಪ್ಪಿದ್ದಾರೆ.

ಇತ್ತ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಪತಿ ಶರತ್ ಹಾಗೂ ಆತನ ತಂದೆ ತಾಯಿ, ಪೂಜಾಳ ಶವ ಹಾಗೂ ಪುಟ್ಟ ಕಂದಮ್ಮನನ್ನು ಬಿಟ್ಟು ಪರಾರಿಯಾಗಿದ್ದಾರೆ. ಚಿಕ್ಕಮಗಳೂರಿನ ಎನ್ ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!