Thursday, June 4, 2026
Homeಕರಾವಳಿಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

- Advertisement -
- Advertisement -

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರೊಂದು ಹೊಂಡಕ್ಕೆ ಬಿದ್ದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕೊಡಾಜೆ ಸಮೀಪ ಗಡಿಸ್ಥಳ ಎಂಬಲ್ಲಿ ನಡೆದಿದೆ.

ಮಾರುತಿ ವ್ಯಾನ್ ಹೆದ್ದಾರಿ ಬದಿಯ ಹೊಂಡಕ್ಕೆ ಚಾಲಕನ ನಿಯಂತ್ರಣ ತಪ್ಪಿ ಬಿದ್ದು ಮೂರು ಪಲ್ಟಿ ಹೊಡೆದಿದ್ದು ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ಜಖಂಗೊಂಡಿದೆ ಎನ್ನಲಾಗಿದೆ. ಕುಶಾಲನಗರ ಮೂಲದ ಕುಟುಂಬವೊಂದು ಮಂಗಳೂರಿನಿಂದ ಊರಿಗೆ ಹೋಗುತ್ತಿದ್ದ ಸಂದರ್ಭ ಕೊಡಾಜೆ ಸಮೀಪ ತಾಂತ್ರಿಕ ವೈಫಲ್ಯದಿಂದಾಗಿ ಈಗಾಗಿದೆ ಎನ್ನಲಾಗಿದೆ.

ಚಾಲಕ ಹಾಗೂ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವ್ಯಾನ್ ಒಳಗಡೆ ಸಿಲುಕಿಕೊಂಡಿದ್ದ ಚಾಲಕನನ್ನು ತಕ್ಷಣವೇ ಹೊರಕ್ಕೆ ತೆಗೆದು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!