Saturday, June 13, 2026
Homeಮನರಂಜನೆಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿ ಸರ್ಕಾರಿ ಶಾಲೆಯ ಮಕ್ಕಳಿಗೆ ಅರ್ಪಣೆ; ನಟ ರಿಷಬ್ ಶೆಟ್ಟಿ...

ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿ ಸರ್ಕಾರಿ ಶಾಲೆಯ ಮಕ್ಕಳಿಗೆ ಅರ್ಪಣೆ; ನಟ ರಿಷಬ್ ಶೆಟ್ಟಿ ಹೇಳಿಕೆ

- Advertisement -
- Advertisement -

ಮೈಸೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರಕ್ಕೆ 2018 ನೇ ಸಾಲಿನ ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರದ ಪ್ರಶಸ್ತಿಯನ್ನು ಸರಕಾರಿ ಶಾಲೆಯ ಮಕ್ಕಳಿಗೆ ಅರ್ಪಿಸುತ್ತೇನೆ ಎಂದು ಚಲನಚಿತ್ರ ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮೈಸೂರಿನ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಇಂದು ಏರ್ಪಡಿಸಿದ್ದ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ತಮ್ಮ ನಿರ್ದೇಶನದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರಕ್ಕೆ 2018 ನೇ ಸಾಲಿನ ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರದ ಪ್ರಶಸ್ತಿ ಸ್ವೀಕರಿಸಿ ರಿಷಬ್ ಶೆಟ್ಟಿ ಮಾತನಾಡಿದರು.

ಚಲನಚಿತ್ರ ತಂತ್ರಜ್ಞಾನವು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಅಗಾಧವಾಗಿ ಬೆಳೆದಿದ್ದು ಅದಕ್ಕೆ ತಕ್ಕಂತೆ ನಾವು ಕಾರ್ಯನಿರ್ವಹಿಸಬೇಕಿದೆ. ಮೈಸೂರಿನಲ್ಲಿ ಸ್ಥಾಪಿಸಲಾಗುವ ಚಿತ್ರನಗರಿಯು ಇದಕ್ಕೆ ಪೂರಕವಾಗಲಿದೆ ಎಂದು ರಿಷಬ್ ಶೆಟ್ಟಿ ಅಭಿಪ್ರಾಯಪಟ್ಟರು.

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ 162 ಎಕರೆ ಜಮೀನು ನೀಡಿರುವ ಮುಖ್ಯಮಂತ್ರಿಗಳಿಗೆ ಇದೇ ವೇಳೆ ರಿಷಬ್ ಶೆಟ್ಟಿ ಅಭಿನಂದನೆ ಸಲ್ಲಿಸಿದರು.ಅಲ್ಲದೇ, ಸರಕಾರ ನೀಡುವ ಪ್ರಶಸ್ತಿಯಿಂದ ಪ್ರೋತ್ಸಾಹ ಹಾಗೂ ಬೆಂಬಲ ದೊರಕಿದಂತಾಗುತ್ತದೆ ಎಂದು ಹೇಳಿರುವ ರಿಷಬ್ ಶೆಟ್ಟಿ, ಅನಿವಾರ್ಯ ಕಾರಣಗಳಿಂದ ಬಾಕಿ ಇರುವ ಪ್ರಶಸ್ತಿಗಳನ್ನು ಆದಷ್ಟು ಬೇಗನೇ ಘೋಷಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿರುವುದು ಸಂತಸ ತಂದಿದೆ ಎಂದಿದ್ದಾರೆ.

- Advertisement -

Latest News

error: Content is protected !!