- Advertisement -
![]()
- Advertisement -
ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಾಜ್ಯ ಸರಕಾರ ನೂತನವಾಗಿ ಇಎಸ್‌ಐ ಆಸ್ಪತ್ರೆಯನ್ನು ಇಎಸ್‌ಐಸಿಗೆ ಹಸ್ತಾಂತರಿಸಲು ಅನುಕೂಲವಾಗುವಂತೆ ರಚಿಸಿದ ಕರ್ನಾಟಕ ಇಎಸ್‌ಐ ಸೊಸೈಟಿಗೆ ನಾಮ ನಿರ್ದೇಶನಗೊಂಡಿರುವ ಸದಸ್ಯರ ಆಯ್ಕೆಗೆ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಂದಿನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸೊಸೈಟಿ ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಬೇಕು. ಇದರಿಂದ ಮಂಗಳೂರಿನ ಇಎಸ್‌ಐ ಆಸ್ಪತ್ರೆಯನ್ನೂ ನೌಕರರ ರಾಜ್ಯ ವಿಮಾ ನಿಗಮವು ಸ್ವಾಧೀನಪಡಿಸಿಕೊಳ್ಳಲು ಅನುಕೂಲವಾಗುತ್ತದೆ. ಶಾಸಕ ವೇದವ್ಯಾಸ ಕಾಮತ್ ಸಹ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿಯಾಗಿ ಸೊಸೈಟಿ ರಚನೆಗೆ ಶೀಘ್ರ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದರು ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -


