Sunday, June 7, 2026
Homeಕರಾವಳಿಉಡುಪಿಉಡುಪಿ: ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ ನಲ್ಲಿ ಕರೆದುಕೊಂಡು ಹೋಗಿ ರೆಡ್ ಹ್ಯಾಂಡ್...

ಉಡುಪಿ: ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ ನಲ್ಲಿ ಕರೆದುಕೊಂಡು ಹೋಗಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಯುವಕ

- Advertisement -
- Advertisement -

ಉಡುಪಿ: ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ ನಲ್ಲಿ ಕರೆದುಕೊಂಡು ಹೋಗಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ.  ಶ್ರೀಶಾಂತ್ ಪೂಜಾರಿ (20) ಸಿಕ್ಕಿ ಬಿದ್ದ ಯುವಕ.ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್ ಗೆ ಪೊಲೀಸರೊಂದಿಗೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಲಾಡ್ಜ್ ಗೆ ಬಾಲಕಿಯ ನಕಲಿ ಆಧಾರ್ ಕಾರ್ಡ್ ನೀಡಿ ಕರೆದುಕೊಂಡು ಹೋಗಿ ರೆಡ್ಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶ್ರೀಶಾಂತ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.ಈ ಬಗ್ಗೆ ಮಾಹಿತಿ ತಿಳಿದ ಇನ್ನೋರ್ವ ಬಾಲಕಿ ಕೂಡ ತನಗೂ ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದ ಶ್ರೀಶಾಂತ್ ವಿರುದ್ಧ ಉಡುಪಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎನ್ನಲಾಗಿದೆ.

- Advertisement -

Latest News

error: Content is protected !!