ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷರ ಮಂಗಳೂರು ನೂತನ ಕಚೇರಿ ಬಿಜೈ ಮೆಸ್ಕಾಂ ಕಾರ್ಪೊರೇಟ್ ಕಟ್ಟಡದಲ್ಲಿ ನ.7 ರಂದು ಶುಕ್ರವಾರ ಉದ್ಘಾಟನೆಗೊಂಡಿತು. ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್ ಜಯ ಕುಮಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮೆಸ್ಕಾಂ ವಿಭಾಗದ ಅಧ್ಯಕ್ಷ ಕೆ ಹರೀಶ್ ಕುಮಾರ್, ಕುದ್ರೋಳಿ ಗೋಕರ್ಣಾಥೇಶ್ವರ ಕ್ಷೇತ್ರದ ಅಧ್ಯಕ್ಷ ಜಯರಾಜ್, ಕೋಶಾಧಿಕಾರಿ ಪದ್ಮರಾಜ್ ಅರ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ,ಮಾಜಿ ಶಾಸಕ ಜೆ ಅರ್ ಲೋಬೋ, ನಮಿತಾ ಹರೀಶ್ ಕುಮಾರ್, ಮೆಸ್ಕಾಂ ತಾಂತ್ರಿಕ ನಿರ್ದೇಶಕ ಹರೀಶ್ ಕುಮಾರ್, ಮೆಸ್ಕಾಂ ಮುಖ್ಯ ಆರ್ಥಿಕ ಅಧಿಕಾರಿ ಮುರಳೀದರ ನಾಯ್ಕ್, ಮೆಸ್ಕಾಂ ಆರ್ಥಿಕ ಸಲಹೆಗಾರ ದೇವರಾಜ್, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಶಾಲೆಟ್ ಪಿಂಟೊ, ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಜರ, ರಾಜ್ಯ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಉಪಸ್ಥಿತರಿದ್ದರು. ಮೆಸ್ಕಾ ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು


