Saturday, June 6, 2026
Homeಕರಾವಳಿಮಂಗಳೂರುಕಡಬ: ಸೋಷಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್ ಹಾಕಿದ ಯುವಕನನ್ನು ವಶಕ್ಕೆ ಪಡೆದ ಪೊಲೀಸರು

ಕಡಬ: ಸೋಷಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್ ಹಾಕಿದ ಯುವಕನನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಕಡಬ: ಸೋಷಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್ ಹಾಕಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕಡಬದಲ್ಲಿ ನಡೆದಿದೆ. ಮಹಮ್ಮದ್ ಮುನಾವರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ,

target_boy900 ಎಂಬ Instagram ಖಾತೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ, ಪ್ರತೀಕಾರಕ್ಕೆ ಪ್ರಚೋದಿಸುವಂತಹ ಸಂದೇಶವನ್ನು ಪ್ರಸಾರ ಮಾಡಲಾಗಿತ್ತು. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ಈ ಪ್ರಕರಣದ ತನಿಖೆ ನಡೆಸಿ ನ.8 ರಂದು  ರಂದು ಮಂಗಳೂರಿನ ಕಸಬಾ ಬೆಂಗ್ರೆಯ ಮಹಮ್ಮದ್ ಮುನಾವರ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!