- Advertisement -
![]()
- Advertisement -
ವಿಟ್ಲ ಕೆಎಸ್ ಆರ್ಟಿಸಿ ಬಸ್ ನಿಲ್ದಾಣದ ಬಳ ಚರಂಡಿಯಲ್ಲಿ ಸೋಮವಾರ ಬೆಳಗ್ಗೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ವಿಟ್ಲ ಕಸಬಾ ಗ್ರಾಮದ ಕಾಶಿಮಠ ನಿವಾಸಿ ಮಂಜುನಾಥ (55) ಮೃತ ವ್ಯಕ್ತಿ.
ಅಡಿಕೆ ಸಂಸ್ಕರಣೆ ಘಟಕವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ ಭಾನುವಾರ ರಾತ್ರಿ 9:30ರ ಬಳಿಕ ನಾಪತ್ತೆಯಾಗಿದ್ದರು. ಸೋಮವಾರ ಬೆಳಗ್ಗೆ, ಪಾದಚಾರಿಗಳು ಚರಂಡಿಯ ನೀರಲ್ಲಿ ಮೃತದೇಹವೊಂದು ತೇಲುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಮೇಲಕ್ಕೆತ್ತಿ ಪರಿಶೀಲಿಸದಾಗ ಅದು ಮಂಜುನಾಥರದ್ದು ಎಂದು ತಿಳಿದುಬಂದಿದೆ. ಮಂಜುನಾಥ ಮದ್ಯಪಾನ ವ್ಯಸನಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ಅವರು ಚರಂಡಿಗೆ ಬಿದ್ದು ಸಾವನ್ನಪ್ಪಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


