ಚಿಕ್ಕಮಗಳೂರು: ಗೃಹಸಚಿವ ಡಾ. ಜಿ. ಪರಮೇಶ್ವರ್ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಬಂಧಿಸಲ್ಪಟ್ಟಿದ್ದ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವ ಮೋರ್ಛಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕರಿಗೆ ಮೊಬೈಲ್ ನೀಡಿರುವುದನ್ನು ಖಂಡಿಸಿ ಸೋಮವಾರ ಚಿಕ್ಕಮಗಳೂರಿನಲ್ಲಿ ನಡೆದಿದ್ದ ಬಿಜೆಪಿ ಯುವ ಮೋರ್ಛಾ ಪ್ರತಿಭಟನೆ ವೇಳೆ ಗೃಹ ಸಚಿವರ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಸಂತೋಷ್ ಕೋಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದರು.
ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಬಂಧಿಸಿದ್ದ ಪೊಲೀಸರು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಈ
ವೇಳೆ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಅದೇಶ ಹೊರಡಿಸಿದ್ದಾರೆ.
ಸಂತೋಷ್ ಕೋಟ್ಯಾನ್ ಬಂಧನಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಬಿಜೆಪಿಯಿಂದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಕೂಡಾ ನಡೆದಿತ್ತು.


