- Advertisement -
![]()
- Advertisement -
ಜಿಲ್ಲೆಯಲ್ಲಿ ನಡೆಯುವಂತಹ ಕಂಬಳಕ್ಕೆ ತಲಾ 5 ಲಕ್ಷ ರೂ. ನಂತೆ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ ಎಂದು ಶಾಸಕ ಅಶೋಕ್ ಕುಮಾರ್‌ರೈ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಯಲ್ಲಿ ನಡೆಯುವ ಹತ್ತು ಕಂಬಳ ಕೂಟಕ್ಕೆ ತಲಾ 5 ಲಕ್ಷ ರೂ. ನಂತೆ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದ್ದು, ಪ್ರವಾಸೋಧ್ಯಮ ಇಲಾಖೆಯ ಮೂಲಕ 2024-25 ನೇ ಸಾಲಿನ ಕಂಬಳದ ಅನುದಾನ ಸರಕಾರ ಬಿಡುಗಡೆ ಮಾಡಿದೆ ಎನ್ನಲಾಗಿದೆ.
ಈ ಪಟ್ಟಿಯಲ್ಲಿ ಪುತ್ತೂರು , ಉಪ್ಪಿನಂಗಡಿ ಜಪ್ಪು, ಬಂಟ್ವಾಳ, ವೇಣೂರು, ಮೂಲ್ಕಿ, ಮಂಗಳೂರು, ನರಿಂಗಾಣ, ಮೂಡಬಿದ್ರಿ ಹಾಗೂ ಐಕಳ ಕಂಬಳವಿದ್ದು ಈ ಕಂಬಳಕ್ಕೆ 5 ಲಕ್ಷ ಅನುದಾನ ದೊರಯಲಿದೆ. ಈ ಹಿಂದೆ ಕಂಬಳಕ್ಕೆ ಅನುದಾನ ಕೋರಿ ಸರಕಾರಕ್ಕೆ ಮನವಿ ಸಲ್ಲಿಸಿದ್ದೆ ಎಂದು ಅವರು ಹೇಳಿಕೆಯಲ್ಲಿ
ತಿಳಿಸಿದ್ದಾರೆ.
- Advertisement -


