Saturday, October 17, 2026
Homeತಾಜಾ ಸುದ್ದಿಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ವಜಾ

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ವಜಾ

- Advertisement -
- Advertisement -

ನವದೆಹಲಿ: ಮೇಕೆದಾಟು ಯೋಜನೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕಕ್ಕೆ ಮಹತ್ವದ ಗೆಲುವು ಸಿಕ್ಕಿದೆ.ಕರ್ನಾಟಕ ರಾಜ್ಯ ಕಾವೇರಿ ನದಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಯೋಜನೆ ವಿಷಯವು ಕೇವಲ ತಜ್ಞ ಸಂಸ್ಥೆಗಳನ್ನು ಪರಿಗಣನೆ ಮಾಡಬೇಕು, ಸುಪ್ರೀಂ ಕೋರ್ಟ್ ಇದರಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಕೋರ್ಟ್ ಹೇಳಿದೆ.

ಅಲ್ಲದೇ, ಯೋಜನೆಯು ಇನ್ನೂ ಆರಂಭಿಕ ಹಂತದಲ್ಲಿದ್ದು, ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ‌ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿರುವ ಕಾರಣ ಮಧ್ಯ ಪ್ರವೇಶ ಮಾಡುವುದಿಲ್ಲ ಹೇಳಿರುವ ಸುಪ್ರೀಂ ಕೋರ್ಟ್ ಎಂದು ತಮಿಳುನಾಡು‌ ಅರ್ಜಿಯನ್ನು ವಜಾ ಮಾಡಿದೆ.

ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾ ಮಾಡಿರುವ ಹಿನ್ನೆಲೆಯಲ್ಲಿ ಏಳು ವರ್ಷಗಳಿಂದ ಮೇಕೆದಾಟು ಅಣೆಕಟ್ಟು ಯೋಜನೆಗೆ ತಮಿಳುನಾಡಿನಿಂದ ಇದ್ದ ದೊಡ್ಡ ಅಡ್ಡಿ ನಿವಾರಣೆಯಾದಂತಾಗಿದೆ.

- Advertisement -

Latest News

error: Content is protected !!