Wednesday, June 3, 2026
Homeತಾಜಾ ಸುದ್ದಿಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ; ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ; ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಕಾಗ್ನಿಜೆನ್ಸ್ ಹಾಗೂ ಸಮನ್ಸ್ ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಕುರಿತು ಇಂದು ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ಪ್ರಕಟಿಸಿದೆ.

ಪ್ರಕರಣ ಸಂಬಂಧ 1ನೇ ತ್ವರಿತ ನ್ಯಾಯಾಲಯ ಫೆಬ್ರವರಿ 28 ರಂದು ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಆರೋಪ ಪಟ್ಟಿಯ ಕಾಗ್ನಿಜೆನ್ಸ್ ಪಡೆದು ಸಮನ್ಸ್ ಜಾರಿಗೊಳಿಸಿದ್ದನ್ನು ಪ್ರಶ್ನಿಸಿದ್ದ ಯಡಿಯೂರಪ್ಪ ಸೇರಿ ನಾಲ್ವರ ಅರ್ಜಿ ಸಂಬಂಧ ಇಂದು ಹೈಕೋರ್ಟ್ ಆದೇಶ ನೀಡಿದೆ.

ಇದೇ ವೇಳೆ, ಅಗತ್ಯವಿಲ್ಲದಿದ್ದಾಗ ಖುದ್ದು ಹಾಜರಿಯಿಂದ ವಿನಾಯಿತಿಗೆ ಯಡಿಯೂರಪ್ಪ ಅರ್ಜಿ ಸಲ್ಲಿಸಬಹುದಾಗಿದ್ದು, ಅಂತಹ ಮನವಿಯನ್ನು ಪರಿಗಣಿಸಲು ತ್ವರಿತ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ‌ ನೀಡಿದೆ.

- Advertisement -

Latest News

error: Content is protected !!