ಬಂಟ್ವಾಳ; ಬಿ.ಸಿ.ರೋಡ್ ನಲ್ಲಿ ನಾರಾಯಣ ಗುರು ವೃತ್ತಕ್ಕೆ ಇನ್ನೋವಾ ಕಾರು ಢಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ 5ರ ವೇಳೆಗೆ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ 09 ಜನರ ಪೈಕಿ, ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75), ರಮ್ಯಾ.(23) ಮೃತರು. ಗಾಯಾಳುಗಳಾದ ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಸೇರಿದಂತೆ ಉಳಿದ 06 ಜನರು ರವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಂಬಂಧಿಕರಾಗಿದ್ದು, ಪ್ರಕರಣದ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ:151/25, ಕಲಂ: 281,125A, 106 BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


