Thursday, June 4, 2026
Homeಚಿಕ್ಕಮಗಳೂರುಚಿಕ್ಕಮಗಳೂರು ; ಜಲಪಾತದ ಬಳಿ ಸೆಲ್ಫಿ ತೆಗೆಯಲು ಹೋಗಿ ನೀರಿಗೆ ಬಿದ್ದು ಯುವಕ ಸಾವು

ಚಿಕ್ಕಮಗಳೂರು ; ಜಲಪಾತದ ಬಳಿ ಸೆಲ್ಫಿ ತೆಗೆಯಲು ಹೋಗಿ ನೀರಿಗೆ ಬಿದ್ದು ಯುವಕ ಸಾವು

- Advertisement -
- Advertisement -

ಚಿಕ್ಕಮಗಳೂರು ; ಜಲಪಾತದ ಬಳಿ ಸೆಲ್ಫಿ ತೆಗೆಯಲು ಹೋಗಿ ನೀರಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ. ಚಿಕ್ಕಮಗಳೂರಿನ ಎಐಟಿ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿ ವರುಣ್ ದೇಸಾಯಿ (19) ಮೃತ ದುರ್ದೈವಿ.

ನಿನ್ನೆ ಸಂಜೆ 2 ಬೈಕಿನಲ್ಲಿ ಐವರು ಸ್ನೇಹಿತರು ಜಲಪಾತ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಘಟನೆ ನಡೆದಿದೆ. ಸೆಲ್ಫಿ ತೆಗೆಯುವ ವೇಳೆ ವರುಣ್ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.


ಘಟನೆಯ ನಂತರ, ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿವರೆಗೂ ಶೋಧ ಕಾರ್ಯ ನಡೆಸಿದ್ದು, ಇಂದು ಬೆಳಗ್ಗೆ ಯುವಕನ ಮೃತದೇಹ ಪತ್ತೆಯಾಗಿದೆ. ಘಟನೆಯ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!