Friday, August 28, 2026
Homeಕರಾವಳಿಮಂಗಳೂರುಉಡುಪಿ; ದಾಂಪತ್ಯ ಸಮಸ್ಯೆಗೆ ಸಂಬಂಧಿಸಿದಂತೆ ಕೌನ್ಸಿಲಿಂಗ್ ಹೋದ ಮಹಿಳೆಯ ಮೈ ಮುಟ್ಟಿ ಲೈಂಗಿಕ ಕಿರುಕುಳ; ಆರೋಪಿ...

ಉಡುಪಿ; ದಾಂಪತ್ಯ ಸಮಸ್ಯೆಗೆ ಸಂಬಂಧಿಸಿದಂತೆ ಕೌನ್ಸಿಲಿಂಗ್ ಹೋದ ಮಹಿಳೆಯ ಮೈ ಮುಟ್ಟಿ ಲೈಂಗಿಕ ಕಿರುಕುಳ; ಆರೋಪಿ ಬಂಧನ

- Advertisement -
- Advertisement -

ಉಡುಪಿ; ದಾಂಪತ್ಯ ಸಮಸ್ಯೆಗೆ ಸಂಬಂಧಿಸಿದಂತೆ ಕೌನ್ಸಿಲಿಂಗ್ ಹೋದ ಮಹಿಳೆಯ ಮೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕಾಪುವಿನಲ್ಲಿ ನಡೆದಿದೆ. ನಿರಂಜನ ಶೇಖರ ಶೆಟ್ಟಿ(56) ಬಂಧಿತ ಆರೋಪಿ.

ದಾಂಪತ್ಯ ಸಮಸ್ಯೆಯ ಕಾರಣದಿಂದ ಮಹಿಳೆಯೊಬ್ಬರು ಕೌನ್ಸಿಲಿಂಗ್ ಗಾಗಿ ಕಾಪು ತಾಲೂಕು ಮೂಳೂರು ಗ್ರಾಮದ ಕಂಕಣಗುತ್ತು ಕಂಪೌಂಡ್ನಲ್ಲಿರುವ “ಸುನಂದಾ ವೆಲ್‌ನೆಸ್‌ ಸೆಂಟರ್‌” ಗೆ ಹೋಗಿದ್ದಾಗ ಆರೋಪಿ ನಿರಂಜನ ಶೇಖರ ಶೆಟ್ಟಿ(52) ಎಂಬಾತ ಸಂತ್ರಸ್ಥೆಯನ್ನು ಕೌನ್ಸಿಲಿಂಗ್ ಮಾಡುವಾಗ ದೈಹಿಕ ಸ್ಪರ್ಶ ಮಾಡಿ ಲೈಂಗಿಕ ಕಿರುಕುಳ ನೀಡಿದ್ದು ಈ ಬಗ್ಗೆ ಸಂತ್ರಸ್ಥೆಯು ಕಾಪು ಪೊಲೀಸ್ ಠಾಣೆಗೆ ಬಂದು ಲಿಖಿತ ದೂರು ನೀಡಿದ ಮೇರೆಗೆ ಆರೋಪಿ ನಿರಂಜನ ಶೇಖರ ಶೆಟ್ಟಿ ಎಂಬಾತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!