Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಕುತ್ರೊಟ್ಟು ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಓರ್ವ ಬಾಲಕ ಸಾವು...

ಬೆಳ್ತಂಗಡಿ : ಕುತ್ರೊಟ್ಟು ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಓರ್ವ ಬಾಲಕ ಸಾವು ; ಹಲವಾರು ಮಂದಿಗೆ ಗಾಯ

- Advertisement -
- Advertisement -

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು. ನಾವೂರಿನ ಶಶಿ ಎಂಬವರ ಆಟೋದಲ್ಲಿದ್ದ ಐದು ಮಂದಿಗೆ ಗಾಯವಾದ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೊಟ್ಟು – ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ.

ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಮೃತಪಟ್ಟ ಬಾಲಕನಾಗಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್ ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಆಟೋದಲ್ಲಿದ್ದ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಆಟೋದಲ್ಲಿ ಹೋಗುತ್ತಿದ್ದಾಗ ನಡೆದ ಘಟನೆಯಾಗಿದೆ.ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!