Thursday, June 4, 2026
Homeತಾಜಾ ಸುದ್ದಿಇಂದು ಪ್ರಧಾನಿ ಮೋದಿ ಭೇಟಿ ಮಾಡಲಿರುವ ಸಿಎಂ ಸಿದ್ಧರಾಮಯ್ಯ

ಇಂದು ಪ್ರಧಾನಿ ಮೋದಿ ಭೇಟಿ ಮಾಡಲಿರುವ ಸಿಎಂ ಸಿದ್ಧರಾಮಯ್ಯ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಗೆ ತೆರಳಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸಲಿರುವ ಸಿದ್ದರಾಮಯ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

ಕಬ್ಬು ಬೆಲೆ ನಿಗದಿಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದ ಸಿದ್ದರಾಮಯ್ಯ ಭೇಟಿ ವೇಳೆ ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಪ್ರಧಾನಿ ಭೇಟಿ ಬಳಿಕ ಇಂದು ರಾತ್ರಿಯೇ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ವಾಪಸಾಗಲಿದ್ದಾರೆ. ಈ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್ ಶನಿವಾರದಿಂದ ದೆಹಲಿಯಲ್ಲೇ ವಾಸ್ತವ್ಯ ಹೂಡಿದ್ದಾರೆ.

- Advertisement -

Latest News

error: Content is protected !!