Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಕುತ್ಲೂರು ಮನೆಕಳ್ಳತನ ಪ್ರಕರಣ; ಕಳ್ಳತನ ಮಾಡಿದ್ದ ಹಣ ಮತ್ತು ಚಿನ್ನಾಭರಣಗಳು

ಬೆಳ್ತಂಗಡಿ : ಕುತ್ಲೂರು ಮನೆಕಳ್ಳತನ ಪ್ರಕರಣ; ಕಳ್ಳತನ ಮಾಡಿದ್ದ ಹಣ ಮತ್ತು ಚಿನ್ನಾಭರಣಗಳು

- Advertisement -
- Advertisement -

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ಲೂರು ಎಂಬಲ್ಲಿ ದಿನಾಂಕ 02.10.2025 ರಿಂದ ದಿನಾಂಕ 6.10.2025ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9,50,000/- ರೂ. ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 85/2025 ಕಲಂ 331(1), 331(4), 305 ಬಿ.ಎನ್. ಎಸ್. 2023 ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿ, ಹೊರ ರಾಜ್ಯಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ, ಮಂಗಳೂರು, ಜೋಕಟ್ಟೆ ನಿವಾಸಿ ಅಬೂಬಕ್ಕರ್ @ ಅಬ್ದುಲ್ ಖಾದರ್ @ ಇತ್ತೆ ಬರ್ಪೆ ಅಬುಬಕ್ಕರ್ (70) ಎಂಬಾತನನ್ನು ನ.11 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ.15 ರವೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು.

ಆರೋಪಿತನಿಂದ ಸುಮಾರು 5,65,000 ರೂ. ಬೆಲೆಬಾಳುವ ಒಟ್ಟು 56.850 ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ ಮಂಗಳೂರು ಕೊಣಾಜೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳವು ಮಾಡಿದ 60,000 ರೂ. ಮೌಲ್ಯದ ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಿಕೊಂಡು ಆರೋಪಿತನನ್ನು ನ.15 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಕರಣದಲ್ಲಿ ಆರೋಪಿ ಪತ್ತೆಕಾರ್ಯದಲ್ಲಿ ಬೆಳ್ತಂಗಡಿ ಡಿ.ವೈ.ಎಸ್. ಪಿ. ಶ್ರೀಮತಿ ರೋಹಿಣಿ ಸಿ.ಕೆ. ರವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶ್ರೀ ಬಿ.ಜಿ. ಸುಬ್ಬಾಪೂರ ಮಠ ರವರ ನೇತೃತ್ವದ ತಂಡದ ಅಧಿಕಾರಿಗಳಾದ ವೇಣೂರು ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್ ಡವಗಿ, ಶ್ರೀಮತಿ ಓಮನ ಎನ್. ಹಾಗೂ ಎ.ಎಸ್. ಐ. ಗಳಾದ ವೆಂಕಟೇಶ್ ನಾಯ್ಕ, ಬೆನ್ನಿಚ್ಚನ್, ಕೃಷ್ಣ, ಧರ್ಮಸ್ಥಳ ಠಾಣೆಯ ಪ್ರಶಾಂತ್, ಚರಣ್, ವೇಣೂರು ಪೊಲೀಸ್ ಠಾಣೆಯ ಬಸವರಾಜ್, ಮೋಹನ್, ಮಪಿಸಿ,ಶ್ರೀಮತಿ ಜಯಶ್ರೀ, ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ರಜಿತ್ ಮಂಗಳೂರು ಜಿಲ್ಲಾ ಗಣಕ ಯಂತ್ರದ ಸಿಬ್ಬಂದಿಗಳಾದ ಸಂಪತ್ ಮತ್ತು ದಿವಾಕರ ರವರುಗಳನ್ನು ಒಳಗೊಂಡ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

- Advertisement -

Latest News

error: Content is protected !!