Friday, June 5, 2026
Homeತಾಜಾ ಸುದ್ದಿಸ್ಪೀಕರ್‌ ಯುಟಿ ಖಾದರ್‌ ಅವರಿಗೆ ʼಸಿಲ್ವರ್ ಎಲಿಫೆಂಟ್ʼ ರಾಷ್ಟ್ರೀಯ ಪ್ರಶಸ್ತಿ

ಸ್ಪೀಕರ್‌ ಯುಟಿ ಖಾದರ್‌ ಅವರಿಗೆ ʼಸಿಲ್ವರ್ ಎಲಿಫೆಂಟ್ʼ ರಾಷ್ಟ್ರೀಯ ಪ್ರಶಸ್ತಿ

- Advertisement -
- Advertisement -

ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನೀಡುವ ʻಸಿಲ್ವರ್ ಎಲಿಫೆಂಟ್ ರಾಷ್ಟ್ರೀಯ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ ಸಮಿತಿಯಿಂದ ಕೊಡಮಾಡುವ ಸ್ಕೌಟ್ಸ್ ಮತ್ತು ಗೈಡ್ಸ್ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಸಿಲ್ವರ್ ಎಲಿಫೆಂಟ್ ಪ್ರಶಸ್ತಿಯನ್ನು ಖಾದರ್ ಅವರಿಗೆ ಭಾರತ್‌ ಸ್ಕೌಟ್ಸ್ ಮತ್ತು ಗೈಡ್ಸ್ ಗೆ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ನೀಡಲಾಗುತ್ತಿದೆ.

ನವೆಂಬರ್ 28ರಂದು ಲಕ್ನೋದಲ್ಲಿ ನಡೆಯಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಜ್ರಮಹೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ ಸಮಿತಿ ತಿಳಿಸಿದೆ..

ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪಸ್ಥಿತರಿರಲಿದ್ದಾರೆ.

- Advertisement -

Latest News

error: Content is protected !!