- Advertisement -
![]()
- Advertisement -
ಕಾರ್ಕಳ : ಇಲ್ಲಿನ ಕ್ರೈಸ್ತಕಿಂಗ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಶಗುನ್ ಎಸ್. ವರ್ಮ ಚೀನಾದ ಶಾಂಗ್ಲೋದಲ್ಲಿ ಡಿ.3 ರಿಂದ 13 ವರೆಗೆ ನಡೆಯಲಿರುವ ವಿಶ್ವ ಶಾಲಾ ಮಕ್ಕಳ 15 ವರ್ಷ ಒಳಗಿನ ವಯೋಮಿತಿಯ ವಾಲಿಬಾಲ್ ಪಂದ್ಯಾಟದ ಭಾರತದ ಬಾಲಕಿಯರ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಅ.24 ರಿಂದ ರಾಂಚಿಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾದ ಆಶ್ರಯದಲ್ಲಿ ನಡೆದ ಅಯ್ಕೆ ತರಬೇತಿ ಶಿಬಿರದಲ್ಲಿ ಅಂತಿಮವಾಗಿ ಶಗುನ್ ಆಯ್ಕೆ ನಡೆದಿದೆ ಎನ್ನಲಾಗಿದೆ.
ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿರುವ 12 ಆಟಗಾರರಲ್ಲಿ ಶಗುನ್ ವರ್ಮ ಹೆಗ್ಡೆ ಕರ್ನಾಟಕದಿಂದ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ. ಇವರು ಶೃತಿ ಮತ್ತು ಸಂದೇಶ್ ವರ್ಮ ದಂಪತಿಗಳ ಪುತ್ರಿಯಾಗಿದ್ದಾರೆ.
ಇವರು ಜೋಡುರಸ್ತೆ ಕೊರಚೊಟ್ಟು ಕ್ರೀಡಾಂಗಣದಲ್ಲಿ ಸಂತೋಷ್ ಡಿ’ಸೋಜಾ, ಜೀವನ್ ಡಿ’ ಸಿಲ್ವಾ, ಜೈರಾಜ್ ಪೂಜಾರಿ ಹಾಗೂ ಎಸ್.ಡಿ.ಎಮ್ ಉಜಿರೆಯ ರಮೇಶ್ ಇವರಿಂದ ಕ್ರೀಡಾ ತರಬೇತಿಯನ್ನು ಪಡೆದಿರುತ್ತಾರೆ.
- Advertisement -


