Saturday, June 6, 2026
Homeತಾಜಾ ಸುದ್ದಿಸಣ್ಣ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ; ಕಟ್ಟುನಿಟ್ಟಿನ ನಿಯಮ ಜಾರಿ

ಸಣ್ಣ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ; ಕಟ್ಟುನಿಟ್ಟಿನ ನಿಯಮ ಜಾರಿ

- Advertisement -
- Advertisement -

ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು ೨೦೨೨ರ ನಿಯಮ ೧೩೮ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಉಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ.

ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಕೆ. ಅರ್ಚನಾ ಭಟ್ ಎಂಬವರು ೨೦೨೩ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿತು.

- Advertisement -

Latest News

error: Content is protected !!