Thursday, June 4, 2026
Homeಕರಾವಳಿಉಡುಪಿಉಡುಪಿ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಕಾರು

ಉಡುಪಿ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಕಾರು

- Advertisement -
- Advertisement -

ಉಡುಪಿ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನಾವುಂದ ಫ್ಲೈಓವರ್ ಮೇಲೆ ಗುರುವಾರ ಮಧ್ಯಾಹ್ನ ನಡೆದಿದೆ. ಕಾರಿನ ಚಾಲಕ ನಿತೇಶ್(31) ಮತ್ತು ಪ್ರಯಾಣಿಕ ಚಂದು (73) ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಂದಾಪುರ ಕಟ್ಕೆರೆಯಿಂದ ಉಪ್ಪುಂದಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಘಟನೆಯಿಂದ ರಸ್ತೆಯುದ್ದಕ್ಕೂ ದಟ್ಟ ಹೊಗೆ ಆವರಿಸಿ, ಹೆದ್ದಾರಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಘಟನಾ ಸ್ಥಳಕ್ಕಾಗಮಿಸಿದ ಬೈಂದೂರು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!