Wednesday, June 3, 2026
HomeWorld7 ಕೋಟಿ ದರೋಡೆ ಪ್ರಕರಣ: ಸಿಎಂಎಸ್‌ ಮಾಜಿ ನೌಕರ ಅರೆಸ್ಟ್‌

7 ಕೋಟಿ ದರೋಡೆ ಪ್ರಕರಣ: ಸಿಎಂಎಸ್‌ ಮಾಜಿ ನೌಕರ ಅರೆಸ್ಟ್‌

- Advertisement -
- Advertisement -

ಬೆಂಗಳೂರಿನಲ್ಲಿ 7 ಕೋಟಿ ರೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್‌ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದು, ಜೊತೆಗೆ 5.30 ಕೋಟಿ ರೂ ಹಣವನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಝೇವಿಯರ್‌ ಎಂದು ಗುರುತಿಸಲಾಗಿದ್ದು, ಈತ ಕಾನ್ಸ್‌ಟೇಬಲ್‌ ಅಣ್ಣಪ್ಪನ ಸ್ನೇಹಿತ ಎಂದು ಗುರುತಿಸಲಾಗಿದೆ. ಇಬ್ಬರು ಸೇರಿಕೊಂಡು ಈ ದರೋಡೆಗೆ ಸ್ಕೆಚ್‌ ಹಾಕಿದ್ದರು.

ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆ ಇನ್ಸ್‌ಪೆಕ್ಟರ್‌ ಅಣ್ಣಪ್ಪ ನಾಯಕ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯಕ್‌ ಇಡೀ ದರೋಡೆಯ ಮಾಸ್ಟರ್‌ ಮೈಂಡ್‌ ಎನ್ನಲಾಗಿದ್ದು, ಈತನ ಬಂಧನದ ಬೆನ್ನಲ್ಲೇ ಸ್ನೇಹಿತ ಝೇವಿಯರ್‌ನನ್ನು ಕೂಡ ಬಂಧಿಸಲಾಗಿದೆ. ಇನ್ನು ಅಣ್ಣಪ್ಪ ನಾಯ್ಕ್‌ ದರೋಡೆ ಮಾಡಲು ಹುಡುಗರ ಗ್ಯಾಂಗ್‌ ರೆಡಿ ಮಾಡಿದ್ದನು. ಕಳ್ಳತನ ಹೇಗೆ ಮಾಡಬೇಕು? ಹೇಗೆ ತಪ್ಪಿಸಿಕೊಳ್ಳಬೇಕು ಎಂದು ಈತ ಹುಡುಗರಿಗೆ ತರಬೇತಿ ಕೊಟ್ಟಿದ್ದನು. ಈತನ ಪ್ಲ್ಯಾನ್‌ನಂತೆ ಹುಡುಗರು 7.11 ಕೋಟಿ ದರೋಡೆ ಮಾಡಿದ್ದಾರೆ ಎನ್ನಲಾಗಿದ್ದು, ಸಿಎಂಎಸ್‌ ಸೆಕ್ಯುರಿಟಿ ಏಜೆನ್ಸಿಯ ಮಾಜಿ ಉದ್ಯೋಗಿಗಳು ಕೂಡ ದರೋಡೆಗೆ ಸಾಥ್ ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

- Advertisement -

Latest News

error: Content is protected !!