Wednesday, June 3, 2026
Homeಕರಾವಳಿಉಡುಪಿಉಡುಪಿ : ಪಾಕಿಸ್ತಾನಕ್ಕೆ ಹಡಗುಗಳ ಗೌಪ್ಯ ಮಾಹಿತಿ ರವಾನೆ;ಉಡುಪಿ ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

ಉಡುಪಿ : ಪಾಕಿಸ್ತಾನಕ್ಕೆ ಹಡಗುಗಳ ಗೌಪ್ಯ ಮಾಹಿತಿ ರವಾನೆ;ಉಡುಪಿ ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಉಡುಪಿ; ಭಾರತೀಯ ನೌಕಾ ಪಡೆ ಗೆ ಸಂಬಂಧಿಸಿದ  ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ರೋಹಿತ್(29) ಮತ್ತು ಸಂತ್ರಿಶ್(37) ಬಂಧಿತ ಆರೋಪಿಗಳು.

ಆರೋಪಿಗಳನ್ನು ಸುಷ್ಮಾ ಮೆರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗಿತ್ತು. ಕೇರಳದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕೊಚ್ಚಿನ್ ಶಿಪ್‌ಯಾರ್ಡ್, ಭಾರತೀಯ ನೌಕಾಪಡೆಗೆ ಟಗ್ ಹಡಗುಗಳು ಮತ್ತು ಖಾಸಗಿ ಸಂಸ್ಥೆಗಳಿಗೆ ಹಡಗುಗಳನ್ನು ನಿರ್ಮಿಸುವಲ್ಲಿ ತೊಡಗಿರುವ ಪ್ರಮುಖ ಹಡಗು ನಿರ್ಮಾಣ ಸಂಸ್ಥೆಯಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ಆರೋಪಿಗಳು ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ, ರಹಸ್ಯ ತಾಂತ್ರಿಕ ಮಾಹಿತಿಗಳನ್ನು ವಾಟ್ಸಾಪ್ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು ಎಂಬ ಗಂಭೀರ ವಿಚಾರ ಈಗ ಬಯಲಾಗಿದೆ. ಕೇರಳದಲ್ಲಿ ಕೆಲಸ ಮಾಡುವ ಸಮಯದಲ್ಲಿ ರೋಹಿತ್ ಹಲವು ಬಾರಿ ಮಾಹಿತಿ ಹಂಚಿಕೊಂಡಿದ್ದು, ಮಲ್ಪೆಗೆ ಬರುವವರೆಗೂ ಈ ಚಟುವಟಿಕೆ ಮುಂದುವರಿದಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಈ ಕುರಿತು ಕೊಚ್ಚಿನ್ ಶಿಪ್ ಯಾರ್ಡ್ ಸಿಇಒ ನೀಡಿದ ದೂರಿನ ಆಧಾರದಲ್ಲಿ ಉಡುಪಿ ಪೊಲೀಸರು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅವರ ವಿರುದ್ಧ ದೇಶದ ಸಾರ್ವಭೌಮತೆಗೆ ಧಕ್ಕೆ ತರುವ, ಗೌಪ್ಯ ಮಾಹಿತಿ ಮಾರಾಟ ನಡೆಸಿದ ಆರೋಪಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮಾಹಿತಿ ಹಂಚಿಕೆ ಮಾಡಿ ಹಣ ಪಡೆಯುತ್ತಿದ್ದರೆಂಬ ಅಂಶವೂ ತನಿಖೆಯಿಂದ ಬೆಳಕಿಗೆ ಬಂದಿದೆ.

- Advertisement -

Latest News

error: Content is protected !!