Saturday, August 29, 2026
Homeತಾಜಾ ಸುದ್ದಿಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಮಾಜಿ ಸಿಎಂ ಯಡಿಯೂರಪ್ಪ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಮಾಜಿ ಸಿಎಂ ಯಡಿಯೂರಪ್ಪ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ನ ಕದ ತಟ್ಟಿದ್ದಾರೆ.

ಸಮನ್ಸ್ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಇತ್ತೀಚೆಗೆ ಹೈಕೋರ್ಟ್‍ನ ಏಕಸದಸ್ಯ ಪೀಠ ಯಡಿಯೂರಪ್ಪ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ವಿಚಾರಣೆ ಎದುರಿಸುವಂತೆ ಆದೇಶಿಸಿತ್ತು.

ಇದೀಗ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಲು ಬಿಎಸ್‍ವೈ ಮುಂದಾಗಿದ್ದಾರೆ. ಈ ಸಂಬಂಧ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ನವದೆಹಲಿಗೆ ತೆರಳಿದ್ದು, ವಕೀಲರನ್ನು ಭೇಟಿ ಮಾಡಿ ಕಾನೂನು ಹೋರಾಟ ನಡೆಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ.

- Advertisement -

Latest News

error: Content is protected !!