Monday, June 8, 2026
Homeಕರಾವಳಿಮಂಗಳೂರುಕಡಬ:  ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚನೆ ಪ್ರಕರಣ: ಆರೋಪಿಗೆ ಜಾಮೀನು...

ಕಡಬ:  ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಮಂಜೂರು

- Advertisement -
- Advertisement -

ಕಡಬ:  ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಜಾಮೀನು ಮಂಜೂರು ಆಗಿದೆ.

ಕಡಬದ  ಬೆಳಂದೂರು ನಿವಾಸಿ ಅಬ್ದುಲ್ ರಮೀಝ್ ಎಂಬಾತ ಪುತ್ತೂರಿನ ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಇರಿಸಿ ರೂ.9.25,000 ಸಾಲ ಪಡೆದು ವಂಚನೆ, ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಇರಿಸಿ ರೂ.2.91 ಲಕ್ಷ ಸಾಲ ಪಡೆದು ವಂಚಿಸಿದ್ದ. ಇದಲ್ಲದೆ  ಮೂರ್ತೆದಾರರ ಸಹಕಾರಿ ಸಂಘದಲ್ಲಿ ಲತೀಫ್ ಮತ್ತು ಅಬ್ದುಲ್ ರಮೀಝ್ ಅವರು ನಕಲಿ ಚಿನ್ನಾಭರಣ ಅಡವಿರಿಸಿ ರೂ.1.45 ಲಕ್ಷ ಸಾಲ ಪಡೆದು ವಂಚನೆ ಮಾಡಿದ್ದ ಕುರಿತು ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ನೀಡಿದ್ದ ದೂರಿನಂತೆ ಆರೋಪಿಗಳ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಗೆ ಜಾಮೀನು ಮಂಜೂರಾಗಿದೆ.

- Advertisement -

Latest News

error: Content is protected !!