Wednesday, June 3, 2026
Homeಕರಾವಳಿಉಡುಪಿಉಡುಪಿ; ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವು

ಉಡುಪಿ; ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವು

- Advertisement -
- Advertisement -

ಉಡುಪಿ; ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಶಂಕರನಾರಾಯಣ ಗ್ರಾಮದ ಕಲ್ಲಗದ್ದೆ ಎಂಬಲ್ಲಿ ನಡೆದಿದೆ. ಸಚಿನ್ ಕಲ್ಲಪ್ಪ ಸಂಕ್ರಟ್ಟಿ(28) ಮೃತ ದುರ್ದೈವಿ.

ಸಚಿನ್ ಅವರು ಶಂಕರನಾರಾಯಣ ಪದವಿ ಕಾಲೇಜಿನಲ್ಲಿ ನಡೆಯುತ್ತಿದ್ದ ಹುಟ್ಟೂರು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಂತರ ಸ್ನೇಹಿತ ಬಸವ ಕಿರಣ ಎಂಬವರನ್ನು ಬಸ್ಸಿಗೆ ಬಿಡಲು ಕುಂದಾಪುರಕ್ಕೆ ಬೈಕಿನಲ್ಲಿ ಹೊರಟಿದ್ದರು.

ಅಂಪಾರು ಮಾರ್ಗವಾಗಿ ಕುಂದಾಪುರಕ್ಕೆ ಹೊಗುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಸಚಿನ್ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!