- Advertisement -
![]()
- Advertisement -
ಸುಬ್ರಹ್ಮಣ್ಯ: ಶೇಂದಿ ತೆಗೆಯಲು ತೆಂಗಿನ ಮರವೇರಿದ್ದ ವ್ಯಕ್ತಿ ಮರದಲ್ಲೇ ಸಾವನ್ನಪ್ಪಿರುವ ಘಟನೆ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ.
ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ತೆಗೆಯುತ್ತಿದ್ದರು. ಎಂದಿನಂತೆ ಸೋಮವಾರ ಕೂಡಾ ಶೇಂದಿ ಇಳಿಸಲು ಮರ ಹತ್ತಿದ್ದ ಅವರು ಅಲ್ಲೇ ಅಸ್ವಸ್ಥಗೊಂಡು ಬೊಬ್ಬೆ ಹಾಕಿದರೆನ್ನಲಾಗಿದೆ.
ಇದನ್ನು ಕೇಳಿಸಿಕೊಂಡ ಸ್ಥಳೀಯ ರೋರ್ವರು ಗಮನಿಸಿ ಮರ ಹತ್ತಿದಾಗ ಅವರು ಅವರು ಉಸಿರಾಡುತ್ತಿದ್ದರೆನ್ನಲಾಗಿದೆ. ಬಳಿಕ ಅಗ್ನಿಶಾಮಕ ದಳದವರು ಬಂದ ಮೇಲೆ ಸ್ಥಳೀಯರೋರ್ವರು ಮರ ಹತ್ತಿ ನೋಡಿದಾಗ ಅವರು ಮೃತ ಪಟ್ಟಿದ್ದರೆನ್ನಲಾಗಿದೆ.
- Advertisement -


