- Advertisement -
![]()
- Advertisement -
ಉಡುಪಿ; ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಅಂಗನವಾಡಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಅವರು ಅದೇಶಿಸಿದ್ದಾರೆ.
ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನ Gಡುಪಿ ನಗರ ಠಾಣಾ ವ್ಯಾಪ್ತಿಯ ಮಲ್ಪೆ ಠಾಣಾ ವ್ಯಾಪ್ತಿಯ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯ ಅಂಗನವಾಡಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನ.28ರಂದು ರಜೆ ಘೋಷಣೆ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -


