- Advertisement -
![]()
- Advertisement -
ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮಹಾಂತೇಶ್ ಸಂಬಂಧಿ ಘಟನೆಯ ಬಗ್ಗೆ ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದಿಂದ ವಾಹನ ಚಾಲಯಿಸಿದಕ್ಕೆ ಹೀಗಾಗಿದೆ ಎಂದು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರು ಚಾಲಕ ಅರೋಕಿಯಾ ಅಂಥೋನಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಕಲಬುರ್ಗಿ ಜಿಲ್ಲೆ ಜೇವರ್ಗಿ ಬೈಪಾಸ್ ಬಳಿ ಮಹಾಂತೇಶ್ ಬೀಳಗಿ ಅವರ ಕಾರು ಅಪಘಾತಕ್ಕೀಡಾಗಿದೆ. ಮಹಾಂತೇಶ್ ಬೀಳಗಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ಐದು ಜನರ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


