ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿದ್ದ ಮೊದಲ ಪೋಕ್ಸೋ ಪ್ರಕರಣದಲ್ಲಿ ಸ್ವಾಮೀಜಿ ನಿರ್ದೋಷಿ ಎಂದು ನ್ಯಾಯಾಲಯ ಆದೇಶ ನೀಡಿದೆ.
ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರನ್ನು ಖುಲಾಸೆಗೊಳಿಸಿದೆ. ಸ್ವಾಮೀಜಿ ಪರವಾಗಿ ನ್ಯಾಯವಾದಿ ಸಿ.ವಿ. ನಾಗೇಶ್ ವಾದ ಮಂಡಿಸಿದ್ದರು.
2022ರ ಆಗಸ್ಟ್ ನಲ್ಲಿ ಮುರುಘಾ ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸ್ವಾಮೀಜಿ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿತ್ತು.
2022ರ ಸೆಪ್ಟೆಂಬರ್ ನಲ್ಲಿ ಮುರುಘಾ ಶ್ರೀ ಹಾಗೂ ಎ2 ಆರೋಪಿಯಾಗಿದ್ದ ಹಾಸ್ಟೆಲ್ ವಾರ್ಡನ್ ರಶ್ಮಿ ಬಂಧನವಾಗಿತ್ತು.
2024 ರಲ್ಲಿ ಬಂಧನದಿಂದ ಬಿಡುಗಡೆಗೊಂಡಿದ್ದ ಬಳಿಕ ಸ್ವಾಮೀಜಿ ದಾವಣಗೆರೆಯಲ್ಲಿ ನೆಲೆಸಿದ್ದು, ಸದ್ಯಕ್ಕೆ ಚಿತ್ರದುರ್ಗದ ಮುರುಘಾ ಮಠಕ್ಕೆ ರಾಜ್ಯ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿದೆ.


