- Advertisement -
![]()
- Advertisement -
ಬಂಟ್ವಾಳ: ಅಪರಿಚಿತ ಮಹಿಳೆಯೋರ್ವರ ಮೃತದೇಹ ನೇತ್ರಾವತಿ ನದಿಯಲ್ಲಿ ಬುಧವಾರ ಸುಮಾರು (60) ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್. ಐ.ಸಂದೀಪ್ ಶೆಟ್ಟಿ ತಿಳಿಸಿದ್ದಾರೆ.
ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಅಂದಾಜು ಪ್ರಕಾರ ಇಂದು ಬೆಳಿಗ್ಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ.
ಬಂಟ್ವಾಳ ಪೋಲೀಸರು ತಿಳಿಸಿದ್ದು ಅಪರಿಚಿತ ಮೃತದೇಹದ ಗುರುತಿಗಾಗಿ ಮಹಿಳೆಯ ಸಂಬಂಧಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.
- Advertisement -


