Friday, June 5, 2026
Homeಕರಾವಳಿಉಡುಪಿನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ: ಬಿಗಿ ಭದ್ರತೆ

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ: ಬಿಗಿ ಭದ್ರತೆ

- Advertisement -
- Advertisement -

ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಾಳೆ ನಡೆಯುವ ಲಕ್ಷ ಕಂಠ ಗೀತೆ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಮೋದಿ ಅವರ ಆಗಮನಕ್ಕಾಗಿ ಆದಿ ಉಡುಪಿ ಮೈದಾನದಲ್ಲಿ ಹೆಚ್ಚುವರಿ ಹೆಲಿಪ್ಯಾಡ್‌ಗಳನ್ನು ನಿರ್ಮಾಣ ಮಾಡಲಾಗಿದೆ. ನಿನ್ನೆ ದೆಹಲಿಯಿಂದ ಆಗಮಿಸಿದ ವಾಯುಸೇನೆ ಅಧಿಕಾರಿಗಳು ಗುಣಮಟ್ಟ ಪರೀಕ್ಷೆ ಮಾಡಿದ್ದಾರೆ.

ನಂತರ ವಾಯು ಸೇನೆಯ ಮೂರು ಹೆಲಿಕಾಪ್ಟರ್‌ಗಳು ಬಂದು ಉಡುಪಿ ಆಕಾಶದಲ್ಲಿ ಅನೇಕ ಬಾರಿ ಸುತ್ತು ಹೊಡೆದು ಹೆಲಿಪ್ಯಾಡ್‌ ಇಳಿಯುವ ಮತ್ತು ಟೇಕಾಫ್‌ ಮಾಡುವ ರಿಹರ್ಸೆಲ್‌ ನಡೆಸಿವೆ. ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲದಿರುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಂಡಿದ್ದಾರೆ. ನಾಳೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಭಕ್ತರಿಗೆ ಉಡುಪಿ ಕೃಷ್ಣಮಠ ಹಾಗೂ ರಥಬೀದಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

- Advertisement -

Latest News

error: Content is protected !!