ಉಡುಪಿ; ಸಿಲಿಂಡರ್ ಸ್ಫೋಟವಾಗಿ ಹೋಟೆಲ್ ಹೊತ್ತಿ ಉರಿದ ಘಟನೆ ಮಣಿಪಾಲ ಆರ್‌ಎಸ್‌ಬಿ ಸಭಾಭವನದ ಸಮೀಪವಿರುವ ಡೆಲ್ಲಿ ಡಾಬಾ ಎಂಬ ಹೊಟೇಲಿನ ನಡೆದಿದೆ.
ಗ್ಯಾಸ್ ಸಿಲಿಂಡರ್ ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಸ್ಫೋಟಗೊಂಡು ಹೊಟೇಲ್ ಒಂದು ಸಂಪೂರ್ಣ ಭಸ್ಮವಾಗಿದೆ. ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅಲ್ಲದೇ ಇನ್ನೆರೆಡು ಗ್ಯಾಸ್ ಸಿಲಿಂಡರ್‌ಗಳು ಸ್ಪೋಟಗೊಳ್ಳದಂತೆ ತಡೆದರು ಎಂದು ತಿಳಿದುಬಂದಿದೆ. ಇದರಿಂದ ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ದೆಹಲಿ ಧಾಬಾ ರೆಸ್ಟೋರೆಂಟ್ ಒಳಗೆ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಸ್ಪಷ್ಟಪಡಿಸಿದ್ದಾರೆ ಮತ್ತು ಅಗ್ನಿಶಾಮಕ ಇಲಾಖೆ ಮತ್ತು ಪೊಲೀಸರು ಇಬ್ಬರೂ ಸ್ಥಳವನ್ನು ಪರಿಶೀಲಿಸಿದ್ದಾರೆ ಎಂದು ದೃಢಪಡಿಸಿದ್ದಾರೆ. “ಯಾವುದೇ ಅನುಮಾನವಿಲ್ಲ. ಯಾವುದೇ ವದಂತಿಗಳು ಹರಡದಂತೆ ನಾನು ಈ ಸ್ಪಷ್ಟೀಕರಣವನ್ನು ನೀಡುತ್ತಿದ್ದೇನೆ. ಯಾರಿಗೂ ಗಾಯಗಳಾಗಿಲ್ಲ” ಎಂದು ಅವರು ಹೇಳಿದ್ದಾರೆ.


