ಪುತ್ತೂರು; ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಗೆ ಬೇಲ್ ಸಿಗುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಜಾಮೀನು ಮಂಜೂರಾಗಿದೆ. ಪುತ್ತೂರು ಪಡುವನ್ನೂರು ಗ್ರಾಮದ ನಿವಾಸಿ ಅಬ್ದುಲ್ ಹಾಶೀಮ್ (34) ಎಂಬಾತನಿಗೆ ಜಾಮೀನು ಮಂಜೂರಾಗಿದೆ.
ಪುತ್ತೂರು ನಿವಾಸಿಯೊಬ್ಬರ ಮಾಲೀಕತ್ವದಲ್ಲಿರುವ ಜಮೀನಿನ ಆರ್ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್ಟಿಸಿಯೆಂದು ನಂಬಿಸಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 84/2025 ಕಲಂ 417, 419, 467, 468, 471 ಐ. ಪಿ. ಸಿ ಪ್ರಕರಣ ದಾಖಲಾಗಿರುತ್ತದೆ.
ಅದರಂತೆ ಅಬ್ದುಲ್ ಹಾಶೀಮ್ ನನ್ನು ದಿನಾಂಕ 06.11.2025 ರಂದು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿತ್ತು. ಇದೀಗ ಆರೋಪಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ


