- Advertisement -
![]()
- Advertisement -
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಸ್ತಾಂತರದ ಚರ್ಚೆಗಳು ಜೋರಾಗಿ ನಡೆಯುಚ್ಚಿರುವಾಗಲೇ ಈ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಬ್ರೇಕ್ ಹಾಕುವ ಕೆಲಸ ಮಾಡಿದ್ದಾರೆ.
ಇಂದು ಸಿಎಂ ಹಾಗೂ ಡಿಸಿಎಂ ಕಾವೇರಿ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ರು. ಬಳಿಕ ಇಬ್ಬರು ಸೇರಿ ಸುದ್ದಿಗೋಷ್ಟಿ ನಡೆಸಿದ್ರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗುಂಪುಗಾರಿಕೆ ಮಾಡುವ ಅವಶ್ಯಕತೆ ನಮಗಿಲ್ಲ. ನನ್ನ ಹಾಗೂ ಡಿ ಕೆ ಶಿವಕುಮಾರ್ ಮಧ್ಯೆ ಭಿನ್ನಾಪ್ರಾಯ ಇಲ್ಲ. 2028 ರ ಚುನಾವಣೆಗೆ ಜೊತೆಯಾಗಿ ಕೆಲಸ ಮಾಡುತ್ತೇವೆ. ಅನಗತ್ಯವಾಗಿ ಗೊಂದಲ ನಿರ್ಮಾಣವಾಗಿದೆ. ಹಿಂದೆಯೂ ಭಿನ್ನಾಭಿಪ್ರಾಯ ಇರಲಿಲ್ಲ ಮುಂದೇನೂ ಇರಲ್ಲ ಎಂದು ಸಿಎಂ ತಿಳಿಸಿದ್ದಾರೆ.
- Advertisement -


