Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸರ್ಕಾರಿ ಬಸ್ -ಬೈಕ್ ನಡುವೆ ಅಪಘಾತ; ಬೈಕ್ ಸವಾರ  ಸ್ಥಳದಲ್ಲೇ ಸಾವು

ಬೆಳ್ತಂಗಡಿ : ಸರ್ಕಾರಿ ಬಸ್ -ಬೈಕ್ ನಡುವೆ ಅಪಘಾತ; ಬೈಕ್ ಸವಾರ  ಸ್ಥಳದಲ್ಲೇ ಸಾವು

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಬೈಕ್ ಸವಾರ ಪಾರ್ಪಿಕಲ್ಲು ಎಂಬಲ್ಲಿ ಧರ್ಮಸ್ಥಳ ಕಡೆ ಬರುತ್ತಿದ್ದ ಸರಕಾರಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನ.30 ರಂದು ಬೆಳಗ್ಗೆ ನಡೆದಿದೆ.

ಬೈಕ್ ಸವಾರ ಮೂಲತಃ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡಗಣಹಳ್ಳಿ ನಿವಾಸಿ ಪನ್ನಕೇಶವ ಗೌಡ ಎಂಬವರ ಪುತ್ರ ದೀಪಕ್(24) ಎಂದು ತಿಳಿದು ಬಂದಿದೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ‌. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ‌.

ಇನ್ನು ಅಪಘಾತವಾದ ಕೂಡಲೇ ದೀಪಕ್ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ದೀಪಕ್ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಮದುವೆಗೆ ತೆರಳುತ್ತಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!