- Advertisement -
![]()
- Advertisement -
ಉಡುಪಿ: ಗೂಡ್ಸ್ ಟೆಂಪೋ ಪಲ್ಟಿಯಾಗಿ ಐವರು ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಭವಿಸಿದೆ.
ಕಾಪುವಿನ ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ . ಪರಿಣಾಮ ಟೆಂಪೋದಲ್ಲಿ ಐವರು ಮೃತಪಟ್ಟು ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟೆಂಪೋದಲ್ಲಿ ಒಟ್ಟು ಒಂಭತ್ತು ಮಂದಿ ಕೆಲಸಗಾರರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡಿದ್ದ ನಾಲ್ವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಅಪಘಾತದಿಂದ ಕೆಲಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -


