ಕುವೈತ್‌ನಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿಮಾನ ಮುಂಬೈಯತ್ತ ತೆರಳಿರುವ ಘಟನೆ ಮಂಗಳವಾರ ಡಿ.2 ಮಂಗಳವಾರದಂದು ನಡೆದಿದೆ.
ಇಂಡಿಗೋ 6E1234 ವಿಮಾನದಲ್ಲಿ 228 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು ಎನ್ನಲಾಗಿದ್ದು, ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 6.30 ರ ಸುಮಾರಿಗೆ ತುರ್ತು ಭೂಸ್ಪರ್ಶ ಮಾಡಿರುವುದಾಗಿ ವರದಿ ವಿವರಿಸಿದೆ.
IANS ವರದಿ ಪ್ರಕಾರ, ಮುಂಜಾನೆ ವಾಯು ಸಂಚಾರ ನಿಯಂತ್ರಣ (ಎಟಿಸಿ)ಕಚೇರಿಗೆ ಬೆದರಿಕೆ ಸಂದೇಶ ಬಂದಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಹೈದರಾಬಾದ್ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಕಳುಹಿಸಲಾದ ಬೆದರಿಕೆ ಸಂದೇಶದಲ್ಲಿ ವಿಮಾನದಲ್ಲಿ ಸ್ಫೋಟಕ ಸಾಧನ ಇರಿಸಿರುವ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ವಿಮಾನ ಸಂಚಾರ ಮಾರ್ಗ ಬೇರೆಡೆಗೆ ತಿರುಗಿಸಲು ವಿಮಾನಯಾನ ಸಂಸ್ಥೆ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಂವಹನ ನಡೆಸಿ ಪೈಲಟ್ ಗೆ ಸೂಚನೆ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.


