Wednesday, June 3, 2026
Homeಕರಾವಳಿಉಡುಪಿಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಸುಪ್ರೀಂ ಕೋರ್ಟ್ ನಿಂದ ಮಾರ್ಗಸೂಚಿ

ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಸುಪ್ರೀಂ ಕೋರ್ಟ್ ನಿಂದ ಮಾರ್ಗಸೂಚಿ

- Advertisement -
- Advertisement -

ಉಡುಪಿ: ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಶಾಲಾ ಆವರಣ ಸೇರಿದಂತೆ ಕೆಲವೊಂದು ಸ್ಥಳಗಳಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ, ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಪುರಸಭಾ ಮುಖ್ಯಾಧಿಕಾರಿಗೆ ತಿಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್‌ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು ಮತ್ತು ಇತರ ಸಂಸ್ಥೆಗಳಿಗೆ ತಮ್ಮ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ, ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಪುರಸಭಾ ಮುಖ್ಯಾಧಿಕಾರಿಗೆ ತಿಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಆವರಣಗಳನ್ನು ಪರಿಶೀಲಿಸಿ, ಬೀದಿ ನಾಯಿಗಳು ಕಂಡುಬಂದರೆ ಅವುಗಳ ಸಂಖ್ಯೆಯನ್ನು ಲೆಕ್ಕ ಹಾಕಿ, ತಕ್ಷಣವೇ ಆ ವಿವರಗಳನ್ನು ನಗರಸಭೆ ಆಯುಕ್ತರಿಗೆ ವರದಿ ಮಾಡಬೇಕು . ಹಾಗೆಯೇ ನಗರಸಭೆಯೊಂದಿಗೆ ಸಮನ್ವಯ ಸಾಧಿಸಲು ಜವಾಬ್ದಾರಿಯುತ ಉದ್ಯೋಗಿಯೊಬ್ಬರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಬೇಕು. ಇನ್ನು ಸ್ಥಳಾಂತರಗೊಂಡ ನಂತರ ಬೀದಿ ನಾಯಿಗಳನ್ನು ಆವರಣದೊಳಗೆ ಮತ್ತೆ ಪ್ರವೇಶಿಸಲು ಅಥವಾ ವಾಸಿಸಲು ಅವಕಾಶ ನೀಡಿದರೆ, ಅವುಗಳನ್ನು ಮತ್ತೊಮ್ಮೆ ಸ್ಥಳಾಂತರಿಸುವ ವೆಚ್ಚವನ್ನು ಆಯಾ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು ಎಂದು ಸೂಚಿಸಿದ್ದಾರೆ.

ಇನ್ನು ಈ ನಿರ್ದೇಶನಗಳನ್ನು ಉಲ್ಲಂಘಿಸಿದರೆ, ನ್ಯಾಯಾಲಯದ ಆದೇಶದ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭೆ ಆಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!