- Advertisement -
![]()
- Advertisement -
ಸುಬ್ರಹ್ಮಣ್ಯ: ಪ್ರತಿವರ್ಷ ಚಂಪಾ ಷಷ್ಠಿಯಂದು ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಜಾತ್ರೋತ್ಸವದಲ್ಲಿ ದೈವವು ನದಿಗೆ ಮೀನುಗಳಿಗಾಗಿ ನೈವೇದ್ಯವನ್ನ ಸಮರ್ಪಿಸಿತು.
ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಸಂದರ್ಭ ದೇವಾಲಯದ ಕುಮಾರಧಾರ ಸ್ನಾನ ಘಟ್ಟಕ್ಕೆ ಕೊಪ್ಪರಿಗೆ ಏರುವ ದ್ವಾದಶಿಯಂದು , ದೂರದ ಏನೆಕಲ್ಲು- ಸಂಕಪಾಲ ಸುಬ್ರಹ್ಮಣ್ಯ ದೇವಸ್ಥಾನದ ಮೀನುಗಳು ಬರುತ್ತದೆ. ಜಾತ್ರೆ ಮುಗಿಯುವವರೆಗೂ ಇಲ್ಲೇ ಇರುವ ಮೀನುಗಳು ದೇವಸ್ಥಾನದ ಜಾತ್ರೋತ್ಸವದ ಕೊನೆಯಲ್ಲಿ ನಡೆಯುವ ದೈವದ ಕೋಲದ ಬಳಿಕ ತಮ್ಮ ಸ್ವಸ್ಥಾನಕ್ಕೆ ಮರಳುವುದು ಇಲ್ಲಿ ಪ್ರತಿವರ್ಷ ನಡೆಯುವ ವಾಡಿಕೆಯಾಗಿದೆ.
ಪುರುಷರಾಯ ದೈವದ ಕೋಲದ ಬಳಿಕ ದೈವವು ಎರಡು ಕಿಲೋಮೀಟರ್ ದೂರದಲ್ಲಿರುವ ಕುಮಾರಧಾರಾ ಸ್ನಾನಘಟ್ಟದ ಬಳಿಗೆ ಬಂದು ದೇವರ ಮೀನುಗಳಿಗೆ ನೈವೇದ್ಯ ಹಾಕಿದ ಬಳಿಕ ಅದನ್ನು ತಿಂದು ಅವುಗಳು ಮತ್ತೆ ಬಂದಲ್ಲಿಗೆ ಮರಳುತ್ತವೆ. ಈ ಮೂಲಕ ಜಾತ್ರಾಮಹೋತ್ಸವ ಸಂಪನ್ನಗೊಂಡಿತು.
- Advertisement -


