Thursday, June 4, 2026
Homeಕರಾವಳಿಮಂಗಳೂರುಉಪ್ಪಿನಂಗಡಿ; ಕೀಟನಾಶಕ ಸೇವಿಸಿ ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣ;ಬಾಲಕಿ ತಾಯಿಯಿಂದ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲು

ಉಪ್ಪಿನಂಗಡಿ; ಕೀಟನಾಶಕ ಸೇವಿಸಿ ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣ;ಬಾಲಕಿ ತಾಯಿಯಿಂದ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲು

- Advertisement -
- Advertisement -

ಉಪ್ಪಿನಂಗಡಿ; ಕೀಟನಾಶಕ ಸೇವಿಸಿ ಅಪ್ರಾಪ್ತೆ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆತ್ಮಹತ್ಯೆಗೆ ಶರಣಾದ ಬಾಲಕಿ ತಾಯಿ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದಿನಾಂಕ 4.11.2025 ರಂದು ಬಾಲಕಿ ಮನೆಯಲ್ಲಿ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದಿನಾಂಕ: 12-11- 2025 ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನು ಮೃತ ಬಾಲಕಿಯನ್ನು ಓರ್ವ ಆರೋಪಿಯು ಲೈಂಗಿಕವಾಗಿ ಬಳಸಿಕೊಂಡಿಕೊಂಡಿದ್ದು, ಮತ್ತೋರ್ವ ಆರೋಪಿಯೊಂದಿಗೆ ಸೇರಿ ಬಾಲಕಿಗೆ ಕಿರುಕುಳ ನೀಡಿ, ಬೆದರಿಸಿರುವುದರಿಂದ ಬಾಲಕಿಯು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ, ಮೃತ ಬಾಲಕಿಯ ತಾಯಿ ದಿನಾಂಕ : 28-11-2025 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ  ಮತ್ತೊಂದು ದೂರು ದಾಖಲಿಸಿದ್ದಾರೆ. ಈ  ದೂರಿನ ಮೇರೆಗೆ ಫೋಕ್ಸೋ ಕಾಯ್ದೆ ರಂತೆ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ, ಪ್ರಕರಣದ ಇಬ್ಬರು ಆರೋಪಿಗಳ ಪೈಕಿ ಪ್ರಮುಖ ಆರೋಪಿಯು ಅಪ್ರಾಪ್ತನೆಂದು ಕಂಡುಬಂದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

- Advertisement -

Latest News

error: Content is protected !!