Thursday, June 4, 2026
Homeಕರಾವಳಿಮಂಗಳೂರುಪುತ್ತೂರು; ಮಾದಕವಸ್ತು ಮಾರಾಟದಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಯ ಬಂಧನ.

ಪುತ್ತೂರು; ಮಾದಕವಸ್ತು ಮಾರಾಟದಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಯ ಬಂಧನ.

- Advertisement -
- Advertisement -

ಪುತ್ತೂರು;  ಮಾದಕವಸ್ತು ಮಾರಾಟದಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಬಂಧಿತ.

ದಿನಾಂಕ:03-12-2025 ರಂದು ಬೆಳಿಗ್ಗೆ, ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ಎಂಬಲ್ಲಿರುವ ರೈಲ್ವೇ ಬ್ರಿಡ್ಜ್ ಬಳಿ, ವ್ಯಕ್ತಿಯೋರ್ವ ಮಾದಕವಸ್ತುವನ್ನಿಟ್ಟುಕೊಂಡು ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಆಂಜನೇಯ ರೆಡ್ಡಿ, ಪೊಲೀಸ್‌  ಉಪನಿರೀಕ್ಷಕರು (ಕಾ.ಸು), ಪುತ್ತೂರು ನಗರ ಪೊಲೀಸ್‌ ಠಾಣೆರವರು ಸಿಬ್ಬಂದಿಯೊಂದಿಗೆ  ಸ್ಥಳಕ್ಕೆ ತೆರಳಿ ಆರೋಪಿಯನ್ನು ಹಿಡಿದು ವಿಚಾರಿಸಿದಾಗಿ, ಆತನ ಕೃತ್ಯ ಎಸಗಿರೋದು ಗೊತ್ತಾಗಿದೆ. ಆತನನ್ನು ಹಾಗೂ ಆತನೊಂದಿಗಿದ್ದ ದ್ವಿಚಕ್ರ ವಾಹನ ತಪಾಸಣೆ ನಡೆಸಿದಾಗ, ಆರೋಪಿಯು ಮಾರಾಟ ‌ಮಾಡಲು ಅಕ್ರಮವಾಗಿ ಇಟ್ಟುಕೊಂಡಿದ್ದ 10 ಗ್ರಾಂ MDMA ಎಂಬ ನಿಷೇಧಿತ ಮಾದಕವಸ್ತು  ಪತ್ತೆಯಾಗಿರುತ್ತದೆ. ಆರೋಪಿಯನ್ನು ಮುಂದಿನ‌ ಕಾನೂನುಕ್ರಮಕ್ಕಾಗಿ ವಶಕ್ಕೆ ಪಡೆದು, ಆತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ: 119/2025, ಕಲಂ: 8(C),22(b) NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿರುತ್ತದೆ.

ಆರೋಪಿಯ ಪ್ರಾಥಮಿಕ ವಿಚಾರಣೆ ವೇಳೆ, ಈತನ ವಿರುದ್ಧ ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ 06 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

- Advertisement -

Latest News

error: Content is protected !!