- Advertisement -
![]()
- Advertisement -
ಮಂಗಳೂರು: ನಗರದ ಕೊಡಿಯಾಲ್ ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೋರ್ವ ಸಹ ಕೈದಿಗಳಿಗೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಅಷ್ಟೇಅಲ್ಲದೆ ಅಧಿಕಾರಿ, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಹಾಗೂ ಇತರ ಕೆಲವು ಕೈದಿಗಳು ಜೈಲಿನ ಅಧಿಕಾರಿ, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ನ.29ರಂದು ವಿಚಾರಣಾಧೀನ ಖೈದಿ ಮುಹಮ್ಮದ್ ಆಸಿಫ್ ಎಂಬಾತ ಕಾರಾಗೃಹದ ಅಧೀಕ್ಷಕ ಶರಣಬಸಪ್ಪರ ಕಚೇರಿಯ ಮುಂದೆ ಏರುಧ್ವನಿಯಲ್ಲಿ ಕೂಗಾಡಿಕೊಂಡಿದ್ದಲ್ಲದೆ ‘ಎ’ ವಿಭಾಗದ ಎಲ್ಲಾ ಕೈದಿಗಳು ಹೊರಗೆ ಬರುವಂತೆ ಪ್ರೇರೇಪಿಸಿದ್ದ ಎಂದು ಆರೋಪಿಸಲಾಗಿದೆ. ಅದಕ್ಕೂ ಮೊದಲು ಅಡುಗೆ ಮನೆಯಲ್ಲಿ ಕೆಲಸ ಮಾಡುವ ಮೂವರು ಸಹ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಈ ಬಗ್ಗೆ ಅಧೀಕ್ಷಕರು ಮತ್ತು ಸಿಬ್ಬಂದಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದ ಎಂದು ಪ್ರಕರಣ ದಾಖಲಾಗಿದೆ.
- Advertisement -


