ಬಂಟ್ವಾಳ; ಅಕ್ರಮವಾಗಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ವಶಪಡಿಸಿ ಪೊಲೀಸರು ಪ್ರಕರಣ ದಾಖಲು ಮಾಡಿದ ಘಟನೆ ದಿನಾಂಕ: 04.12.2025 ರಂದು ಬೆಳಿಗ್ಗೆ ಬಂಟ್ವಾಳ, ಕೊಳ್ನಾಡು ಗ್ರಾಮದ ಕೂಡ್ತಮುಗೇರು ಎಂಬಲ್ಲಿ ನಡೆದಿದೆ.
ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ರತ್ನಕುಮಾರ್ ಅವರು ಸಿಬ್ಬಂದಿಯೊಂದಿಗೆ ವಾಹನ ತಪಾಸಣೆ ಮಾಡುವ ವೇಳೆ, ಬೋಳ್ಪದೆ ಕಡೆಯಿಂದ ಕೂಡ್ತಮುಗೇರು ಕಡೆಗೆ ಬರುತ್ತಿದ್ದ KA-12-A-9095 ನೋಂದಣಿಯ ಲಾರಿಯನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ, ಲಾರಿಯಲ್ಲಿ ಕೆಂಪು ಕಲ್ಲು ತುಂಬಿಸಿಕೊಂಡು ಸಾಗಿಸುತ್ತಿರುವುದು ಕಂಡುಬಂದಿರುತ್ತದೆ. ಸದ್ರಿ ಕಲ್ಲುಗಳ ಸಾಗಾಟದ ಬಗ್ಗೆ ಲಾರಿ ಚಾಲಕ ಎನ್.ಸಿ.ಶರೀಪ್ (42) ಎಂಬಾತನಲ್ಲಿ ವಿಚಾರಿಸಿದಾಗ, ಯಾವುದೇ ಪರವಾನಿಗೆ ಅಥವಾ ದಾಖಲಾತಿ ಇಲ್ಲದೆ, ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಕಳ್ಳತನದಿಂದ ತುಂಬಿಸಿಕೊಂಡು ಸಾಗಿಸುತ್ತಿರುವುದು ಕಂಡುಬಂದಿರುತ್ತದೆ. ಮುಂದಿನ ಕಾನೂನು ಕ್ರಮಕ್ಕಾಗಿ ಲಾರಿ ಚಾಲಕನನ್ನು ಹಾಗೂ ಲಾರಿಯನ್ನು ಲೋಡ್ ಸಮೇತ ವಶಕ್ಕೆ ಪಡೆದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


