Saturday, June 13, 2026
Homeಕರಾವಳಿಮಂಗಳೂರುಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಯನ್ನು ಬಂಧಿಸಿದ ಮಂಗಳೂರು ನಗರ ಪೊಲೀಸರು

ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಯನ್ನು ಬಂಧಿಸಿದ ಮಂಗಳೂರು ನಗರ ಪೊಲೀಸರು

- Advertisement -
- Advertisement -

ಮಂಗಳೂರು; ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಕೇರಳದ ತಿರುವನಂತಪುರಂನ ಆದಿತ್ ಗೋಪಾನ್ @ ಮುತ್ತು ಕೃಷ್ಣ(32) ಬಂಧಿತ ಆರೋಪಿ.


ಪ್ರಕರಣದ ವಿವರ;
ದಿನಾಂಕ: 21-11-2025 ರಂದು ಸಂಜೆ ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ದ ಮಹಿಳೆಯು ತನ್ನ ಮನೆಯ ಬಳಿ ಓಣಿಯಲ್ಲಿದ್ದಾಗ ಅಪರಿತ ವ್ಯಕ್ತಿಯು ದ್ವಿಚಕ್ರ ವಾಹನದಲ್ಲಿ ಬಂದು ಚಿನ್ನದ ಸರವನ್ನು ಕಸಿದುಕೊಂಡು ಹೋದ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.


ಈ ಪ್ರಕರಣದ ಆರೋಪಿ ಪತ್ತೆ ಬಗ್ಗೆ ವಿಶೇಷ ತಂಡವನ್ನು ರಚಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ದಿನಾಂಕ: 04-12-2025 ರಂದು ಆರೋಪಿಯ ಬಗ್ಗೆ ವಿಶೇಷ ತಂಡಕ್ಕೆ ದೊರೆತ ಮಾಹಿತಿಯಂತೆ ಕದ್ರಿ ಜೋಗಿ ಮಠದ ಬಳಿ ವಾಹನ ತಪಸಾಣೆ ನಡೆಸುತ್ತಿದ್ದ ಸಮಯ ಸಂಶಯಾಸ್ಪದವಾಗಿ ದ್ವಿಚಕ್ರ ವಾಹನ ಸಂಖ್ಯೆ KA19HC6946 ಚಲಾಯಿಸಿಕೊಂಡು ಬಂದ ವ್ಯಕ್ತಿಯನ್ನು ನಿಲ್ಲಿಸಿ ಪರಿಶೀಲಿಸಿದಾಗ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ ವಾಹನವಾಗಿದ್ದು, ವಿಚಾರಿಸಿದಾಗ ಆರೋಪಿಯು ಕಳ್ಳತನ ಮಾಡಿದ ದ್ವಿ ಚಕ್ರ ವಾಹನವನ್ನು ಬಳಸಿಕೊಂಡು ವಯೋವೃದ್ದರು, ಒಂಟಿ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡಿರುವುದ ಬೆಳಕಿಗೆ ಬಂದಿರುತ್ತದೆ. ಆರೋಪಿಯನ್ನು ಈ ದಿನ ದಿನಾಂಕ 05-12-2025 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಮುಂದಿನ ತನಿಖೆಗಾಗಿ ಆರೋಪಿಯನ್ನು 3 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯ ವಿಚಾರಣೆಯನ್ನು ನಡೆಸಿ ಈ ಕೆಳಕಂಡ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆಯನ್ನು ನಡೆಸಿ ಕಳವಾದ ಸೊತ್ತುಗಳನ್ನು ಸ್ವಾಧೀನ ಪಡಿಸಲಾಗಿದೆ.

ಆರೋಪಿಯ ವಿರುದ್ಧದ ಪ್ರಕರಣಗಳು;

  1. ದಿನಾಂಕ: 21-11-2025 ರಂದು ಕದ್ರಿ ಬಟ್ಟಗುಡ್ಡೆ ಬಳಿ ವಯೋವೃದ್ದ ಮಹಿಳೆಯ 1.5 ಪವನ್ ಸರವನ್ನು ಸುಲಿಗೆ ಮಾಡಿದ ಪ್ರಕರಣ.
  2. ದಿನಾಂಕ: 27-09-2025 ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಕೋಟೆಕೇರಿ ಬಳಿ ಒಂಟಿ ಮಹಿಳೆಗೆ ಚೂರಿ ತೋರಿಸಿ ಬೆದರಿಸಿ 2 ಪವನ್ ಚಿನ್ನದ ಸರವನ್ನು ಸುಲಿಗೆ ಪ್ರಕರಣ.
  3. ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ ಪ್ರಕರಣ.
  4. ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ ಪ್ರಕರಣ.
  5. ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಬಳಿ ನಡೆಸಿದ ದ್ವಿ ಚಕ್ರ ವಾಹನ ಕಳವು ಪ್ರಕರಣ
  6. ಸುರತ್ಕಲ್ ಠಾಣಾ ವ್ಯಾಪ್ತಿಯ ಅಗರಮೇಲು ಬಳಿ ನಡೆಸಿದ ದ್ವಿ ಚಕ್ರ ವಾಹನ ಕಳವು ಪ್ರಕರಣ.
    ಈ ಮೇಲಿನ ಎಲ್ಲಾ ಪ್ರಕರಣಗಳು ಒಟ್ಟು ಸೇರಿ ಆರೋಪಿಯಿಂದ 4 ದ್ವಿ ಚಕ್ರ ವಾಹನ ಮತ್ತು ಚಿನ್ನಾಭರಣ ಸಮೇತ ಒಟ್ಟು 5 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ
    ಆರೋಪಿಯ ಮೇಲೆ ಈಗಾಗಲೇ ತಮಿಳುನಾಡು ರಾಜ್ಯದಲ್ಲಿ ಮನೆಗಳಿಗೆ ಹೊಂಚು ಹಾಕಿ 4 ಚಿನ್ನಾಭರಣ ಕಳ್ಳತನ ಪ್ರಕರಣ ದಾಖಲಾಗಿದ್ದು, ನಾಗರಕೋಯಿಲ್ ಜೈಲಿನಲ್ಲಿ ಸೆರೆವಾಸವನ್ನು ಅನುಭವಿಸಿ ಬಿಡುಗಡೆಗೊಂಡಿರುವ ಆಸಾಮಿಯಾಗಿರುತ್ತಾನೆ. ಈತನು ಅಂತರ್ ರಾಜ್ಯ ಕುಖ್ಯಾತ ಕಳ್ಳನಾಗಿದ್ದು, ಜೈಲಿನಿಂದ ಬಿಡುಗಡೆಯಾದ ನಂತರ ರೈಲಿನಲ್ಲಿ ಭಾರತ ದೇಶದ ಎಲ್ಲಾ ಕಡೆ ಸುತ್ತಾಡಿಕೊಂಡು ರೈಲ್ವೇ ನಿಲ್ದಾಣದ ಬಳಿ ಆಸು ಪಾಸಿನಲ್ಲಿ ಇರುವ ದ್ವಿ ಚಕ್ರವಾಹನ ಕಳ್ಳತನ ಮಾಡಿ ಸುಲಿಗೆ ಮಾಡುತ್ತಿದ್ದನು. ನಂತರ ರೈಲಿನಲ್ಲಿ ವಿವಿಧ ಕಡೆ ಪ್ರಯಾಣ ಮಾಡಿ ತಲೆಮರೆಸಿಕೊಳ್ಳುತ್ತಿದ್ದನು. ಈತನ ಪತ್ತೆಗೆ ಪೊಲೀಸರ ವಿಶೇಷ ಪ್ರಯತ್ನದಿಂದ ಪ್ರಕರಣವು ಅತೀ ಶೀಘ್ರದಲ್ಲಿ ಪತ್ತೆಯಾಗಿರುತ್ತದೆ.
    ಈ ಪ್ರಕರಣವನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಅನಂತ ಪದ್ಮಾನಾಭ ಮತ್ತು ಕದ್ರಿ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕಾರ್ಯಚರಣೆಯನ್ನು ನಡೆಸಿ ಪತ್ತೆ ಮಾಡಿರುತ್ತಾರೆ.ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಠಾಣೆಗಳಲ್ಲಿ 2025 ನೇ ಸಾಲಿನಲ್ಲಿ ಈ ವರೆಗೆ 72 ದ್ವಿ-ಚಕ್ರ ವಾಹನಗಳು ಕಳವಾಗಿದ್ದು, ಇದರ ಪೈಕಿ ಕಳವಾದ 57 ದ್ವಿ-ಚಕ್ರ ವಾಹನಗಳು ಪತ್ತೆ ಮಾಡಲಾಗಿದ್ದು, 15 ದ್ವಿ-ಚಕ್ರ ವಾಹನಗಳು ಮಾತ್ರ ಪತ್ತೆಗೆ ಬಾಕಿ ಇದೆ. ನಗರದಲ್ಲಿ ಒಟ್ಟು ಶೇಕಡಾ 79% ರಂದು ಕಳವಾದ ದ್ವಿ-ಚಕ್ರ ವಾಹನಗಳನ್ನು ಪತ್ತೆ ಹಚ್ಚಲಾಗಿದೆ

- Advertisement -

Latest News

error: Content is protected !!